32. ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.