11. ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.