24. ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.